ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ 100 ನಾಟೌಟ್ ಪ್ರತಿಭಟನೆ

ವಿಟ್ಲ: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಮತ್ತು ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರುದ್ಧ 1೦೦ ನಾಟೌಟ್ ಪ್ರತಿಭಟನೆ ವಿಟ್ಲದ ಬೊಬ್ಬೆಕೇರಿ ಪೆಟ್ರೋಲ್ ಪಂಪ್ ಮುಂಭಾಗ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಎಂ ಎಸ್ ಮಹಮ್ಮದ್ ಮಾತನಾಡಿ ಅವರು ಕೊರೊನಾ ಮಹಾಮಾರಿಯಿಂದ ಜನರು ತತ್ತರಿಸಿ ಹೋಗಿರುವ ನಡುವೆಯೂ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ಕಾರ್ಯ ಮಾಡುತ್ತಿದೆ. ಜನರು ಕಷ್ಟದಲ್ಲಿ ಜೀವನ ನಡೆಸುತ್ತಿದ್ದರೂ ಪ್ರಧಾನಿ ಮೋದಿಯವರು ತಾನೇ ಬುದ್ದಿವಂತ ಭ್ರಮೆಯಲ್ಲಿದ್ದಾರೆ. ಚುನಾವಣೆ ಸಂದರ್ಭ ಬೆಲೆ ಏರಿಕೆ ಮಾಡುವುದಿಲ್ಲ. ಚುನಾವಣೆ ಮುಗಿಯುತ್ತಿದ್ದಂತೆ ದರ ಏರಿಕೆ ಮಾಡುತ್ತಾರೆ. ಅಂದು ಸೈಕಲ್ ಏರಿ ಪ್ರತಿಭಟನೆ ನಡೆಸಿದವರು ನಾಪತ್ತೆಯಾಗಿದ್ದಾರೆ. ಇದೀಗ ಅವರ ಸೈಕಲ್ ಹೋರಾಟ ಎಲ್ಲಿಗೆ ಹೋಯಿತು. ಬಡವರ ಮೇಲೆ ಅಭಿಮಾನ ವಿದ್ದರೆ ಬೆಲೆ ಏರಿಕೆ ವಿರುದ್ಧ ಇಲ್ಲಿಯ ಸಂಸದರು ಮಾತನಾಡಲಿ ಎಂದು ಸವಾಲು ಹಾಕಿದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಪ್ರವೀಣ್ ಚಂದ್ರ ಆಳ್ವ, ವಕ್ತಾರ ರಮಾನಾಥ ವಿಟ್ಲ, ನಗರ ಕಾಂಗ್ರೆಸ್ ಅಧ್ಯಕ್ಷ ಅಶ್ರಪ್ ವಿ.ಕೆ ಎಂ, ಪಟ್ಟಣ ಪಂಚಾಯಿತಿ ಸದಸ್ಯ ಹಸೈನಾರ್ ನೆಲ್ಲಿಗುಡ್ಡೆ, ಎಸ್ ಕೆ ಮಹಮ್ಮದ್, ಶ್ರೀನಿವಾಸ್ ಶೆಟ್ಟಿ ಕೊಲ್ಯ, ಶೇಖ್ ಅಲಿ ಸೇರಾಜೆ, ಅಬ್ದುಲ್ ರಹಿಮಾನ್ ಕುರುಂಬಳ, ಎಂ.ಕೆ ಮೂಸಾ, ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಮಾಜಿ ಅಧ್ಯಕ್ಷ ರಾಲ್ಫ್ ಡಿ ಸೋಜ, ಅಶೋಕ್ ಡಿ ಸೋಜ, ಅಳಿಕೆ ಗ್ರಾ.ಪಂ ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಸುಧಾಕರ್ ಅಳಿಕೆ, ಜಗತ್ ಶಾಂತಪಾಲ ಚಂದಾಡಿ, ಕರೀಂ ಕುದ್ದುಪದವು, ಮಂಜುನಾಥ ರೈ, ರಾಧಾಕೃಷ್ಣ ಶೆಟ್ಟಿ ಪೆರುವಾಯಿ, ಹಂಝ ವಿಕೆಎಂ, ಹನೀಫ್ ಹಳೆಮನೆ, ಅಬ್ದುಲ್ಲ ಕುಂಞ ಕೆಎಂಟಿ, ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.