ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ
ಕೋವಿಡ್ 19 ಸೋಂಕು ಹರಡುವಿಕೆ ತಡೆಯುವ ಕಾರಣದಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ,ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಶುಕ್ರವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿಗೆ ಬರಲಿದ್ದು, ಶನಿವಾರ ಮತ್ತು ಭಾನುವಾರ ಈ ನಾಲ್ಕು ಜಿಲ್ಲೆಗಳಲ್ಲಿ ಅಗತ್ಯ ವಸ್ತು ಮತ್ತು ಸೇವೆಗಳ ಹೊರತುಪಡಿಸಿ ಇತರ ಎಲ್ಲಾ ವ್ಯಾಪಾರ ವಹಿವಾಟು ವಾಹನ ಸಂಚಾರ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರ ಜೊತೆಗೆ ರಾಜ್ಯದ ಇತರ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 9ರಿಂದ ಬೆಳಗ್ಗೆ 5ರ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.