ದೇವಸ್ಥಾನಗಳ ತೆರವು ವಿಚಾರ: ಸರಕಾರ ಈ ಬಗ್ಗೆ ವಿಮರ್ಶೆ ಮಾಡಬೇಕಿದೆ: ದಯಾನಂದ ಕತ್ತಲ್ ಸಾರ್

ರಾಜ್ಯದಲ್ಲಿ ದೇವಸ್ಥಾನಗಳ ತೆರವು ಕಾರ್ಯಾಚರಣೆ ಸರಿಯಲ್ಲ. ಶತಮಾನಗಳ ಹಿಂದೆ ಆರಾಧಿಸಲ್ಪಟ್ಟ ದೇವಸ್ಥಾನಗಳನ್ನು ಕೆಡವುದು ಸರಿಯಲ್ಲ. ಸರ್ಕಾರ ಈ ಬಗ್ಗೆ ಮತ್ತೆ ವಿಮರ್ಶೆ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ತುಳು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ಹೇಳಿದರು.
ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡುವುದು ಎಲ್ಲರ ಕರ್ತವ್ಯ. ಸರಕಾರ ಈ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡುವ ಕೆಲಸ ಮಾಡಬೇಕು. ದೇವಸ್ಥಾನಗಳನ್ನು ಉಳಿಸುವಂತಹ ಕಾನೂನನ್ನು ಜಾರಿಗೆ ತರಬೇಕು. ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ನಡೆಯಬಾರದು ಎಂದು ಹೇಳಿದರು.

 

Related Posts

Leave a Reply

Your email address will not be published.