ದೇವಸ್ಥಾನ ಕೆಡವಿರುವುದಕ್ಕೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ
ನಂಜನಗೂಡಿನಲ್ಲಿ ದೇವಸ್ಥಾನ ಕೆಡವಿರುವುದಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಸರಕಾರವೇ ನೇರ ಹೊಣೆ, 2008ರಲ್ಲಿ ಆದ ಸುಪ್ರೀ ಕೋರ್ಟ್ ಆದೇಶವನ್ನು ಪ್ರಯೋಗಕ್ಕೆ ಒಳಪಡಿಸಿದ್ದು ಬಿಜೆಪಿ ಸರಕಾರ, ಇದು ಸರಕಾರ ಪ್ರಾಯೋಜಿತ ಕಾರ್ಯಕ್ರಮ ಎಂದು ಎಂದು ಮಾಜಿ ಸಚಿವ ಬಿ.ರಮನಾಥ ರೈ ಆಕ್ರೋಶ ವ್ಯಕತಪಡಿಸಿದರು.
ರಾಜ್ಯ ಬಿಜೆಪಿ ಸರಕಾರ ಧಾರ್ಮಿಕ ಕೇಂದ್ರಗಳನ್ನು ಧ್ವಂಸಗೊಳಿಸಿದ ಹಾಗೂ ಅನೇಕ ದೇವಸ್ಥಾನ, ದೈವಸ್ಥಾನ ಮತ್ತು ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವುದರ ವಿರುದ್ದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡಿನ ರಕ್ತೇಶ್ವರೀ ದೇವಸ್ಥಾನದ ಮುಂಭಾಗ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ದೇವಸ್ಥಾನವನ್ನು ಪುನಃ ಕಟ್ಟುವುದು ದೊಡ್ಡ ವಿಷಯವಲ್ಲ, ದೇವಸ್ಥಾನವನ್ನು ಕೆಡವಿದವರಿಗೂ, ಸರ್ಕಾರಕ್ಕೂ ದೇವರು ಶಿಕ್ಷೆ ನೀಡುತ್ತಾನೆ, ಬಿಜೆಪಿ ಸಹಿತವಾಗಿ ಮತೀಯ ಸಂಘಟನೆಗಳು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿವೆ ಎಂದು ಆರೋಪಿಸಿದ್ರು.
ಇನ್ನುಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮನ್ ಮಾತನಾಡಿ ಬಿಜೆಪಿ ಜನಪ್ರತಿನಿಧಿಗಳು ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಾವುದೇ ದೇವಸ್ಥಾನ, ಪ್ರಾರ್ಥನ ಮಂದಿರಗಳನ್ನು ಕೆಡವಲು ಮುಂದಾದರೆ ರಮನಾಥ ರೈ ನೇತೃತ್ವದಲ್ಲಿ ಎದುರಿಸುವುದಾಗಿ ಎಚ್ಚರಿಕೆ ನೀಡಿದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಬೇಬಿ ಕುಂದರ್ , ಸುದೀಪ್ ಕುಮಾರ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್.ಮಹಮ್ಮದ್, ಸದಾಶಿವ ಬಂಗೇರ, ಸುದರ್ಶನ ಜೈನ್, ಜೆಸಿಂತಾ ಡಿಸೋಜಾ, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಮೋಹನ್ ಗೌಡ ಕಲ್ಮಂಜ, ಅಬ್ಬಾಸ್ ಅಲಿ, ಚಿತ್ತರಂಜನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.