ದೇಶಾಭಿಮಾನಕ್ಕಾಗಿ ಬಿಜೆಪಿ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ ಪುತ್ತೂರಿನಲ್ಲಿ ಶಾಸಕ ಸಂಜೀವ ಮಠಂದೂರು ಹೇಳಿಕೆ

ಪುತ್ತೂರು: ದೇಶದ ಜನರ ಸೇವೆ ಮತ್ತು ದೇಶಾಭಿಮಾನಕ್ಕಾಗಿ ಬಿಜೆಪಿ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಹಾಗಾಗಿ ಬಿಜೆಪಿಯ ಕಾರ್ಯಕರ್ತರಿಗೆ ರಾಜಕಾರಣ ವೃತ್ತಿಯಲ್ಲ, ಅದೊಂದು ವೃತವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು

ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕಲ ಅನಾವರಣ ಕಾರ್ಯಕ್ರಮಗಳು ಈಗಾಗಲೇ ನಡೆಯುತ್ತಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಮಂಡಲದ ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಪಲಕ ಅನಾವರಣ ಪೂರ್ಣಗೊಂಡ ಬಳಿಕ ನಗರ ಮಂಡಲದ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಮೂರು ದಿನಗಳು ನಡೆಯುವ ಅನಾವರಣ ಕಾರ್ಯಕ್ರಮಕ್ಕೆ ಅ.29ರಂದು ಕಲ್ಲೇಗದಲ್ಲಿ ಅವರು ಚಾಲನೆ ನೀಡಿ ಮಾತನಾಡಿದರು.

ಬೆಳಿಗ್ಗೆ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆಯ ಬಳಿಕ ಕಾರೆಕ್ಕಾಡಿನಲ್ಲಿ ಬೂತ್ ಸಂಖ್ಯೆ 68ರ ಅಧ್ಯಕ್ಷ ಭಾಮಿ ಅತುಲ್ ಶೆಣೈ ಅವರ ಮನೆಯಲ್ಲಿ ಭಾರತ ಮಾತೆಯ ದೀಪ ಪ್ರಜ್ವಲನೆ ಮಾಡಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಮಫಲಕ ಅನಾವರಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ್, ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಮಾಜಿ ಶಾಸಕಿ ಮಲ್ಲಿಕಾಪ್ರಸಾದ್, ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.