ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರುಗಳ ಪದಗ್ರಹಣ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನವಾಗಿ ಆಯ್ಕೆಯಾದ ಬ್ಲಾಕ್ ಅಧ್ಯಕ್ಷರುಗಳಾಗಿ ನೇಮಕರಾದ 15 ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಘಟಕಗಳ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ ರವರ ನೇತೃತ್ವದಲ್ಲಿ ಜರುಗಿತು

ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಸಂಘಟನೆಗಳು ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರುಗಳಿಗೆ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ ಎಂದು ಹೇಳಿದರು.

ಶಾಸಕ ಯು.ಟಿ ಖಾದರ್ ಮಾತನಾಡಿ, ಕಾರ್ಮಿಕರ ವರ್ಗದ ಪರವಾಗಿ ಕೆಲಸ ಮಾಡಿಕೊಂಡು ಸರ್ಕಾರದ ವಿವಿಧ ಸೌವಲತ್ತುಗಳನ್ನು ಕಾರ್ಮಿಕರ ಕಾಲುಬುಡಕ್ಕೆ ತಲುಪಿಸುವಲ್ಲಿ ಕಾರ್ಮಿಕ ಸಂಘಟನೆಯ ಅಧ್ಯಕ್ಷರುಗಳು ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಧಾನ ಪರಿಷತ್ತ್ ಸದಸ್ಯರಾದ ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಆರ್.ಲೋಬೋ, ಮಾಜಿ ರಾಜ್ಯಸಭಾ ಸದಸ್ಯರಾದ ಇಬ್ರಾಹಿಂ, ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ಕಾರ್ಯದರ್ಶಿ ಪಿ.ವಿ.ಮೋಹನ್, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಶಾಹುಲ್ ಹಮೀದ್, ಬ್ಲಾಕ್ ಅಧ್ಯಕ್ಷರುಗಳಾದ ಪ್ರಕಾಶ್ ಸಾಲಿಯಾನ್, ಸದಾಶಿವ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಸುರೇಂದ್ರ ಕಂಬಳಿ, ಮುಂತಾದ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.