ದ.ಕ ಜಿಲ್ಲೆಯಲ್ಲಿ ಜೂ.21ರವರಗೆ ಲಾಕ್‌ಡೌನ್ ಮುಂದುವರಿಕೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಮುಂದುವರಿಸಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸುವ ನಿಟ್ಟಿನಲ್ಲಿ ವಿಡಿಯೋ ಕಾನ್ಫರೇನ್ ಮೂಲಕ ಗುರುವಾರ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲೆಗೆ ಹೆಚ್ಚುವರಿ ಲಸಿಕೆ ನೀಡಬೇಕೆಂದು ಮನವಿ ಮಾಡಲಾಯ್ತು. 8ವಿಧಾನಸಭಾ ಕ್ಷೇತ್ರದಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯ ಯಶಸ್ವಿಯಾಗಿ ನಡೆದಿದೆ ಎಂದು ಮುಖ್ಯಮಂತ್ರಿಗೆ ಮನವರಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.

ಜೂನ್ 14ರಂದು ಲಾಕ್‌ಡೌನ್ ಅವಧಿ ಮುಕ್ತಾಯಗೊಳ್ಳಲಿದೆ. ಅದರೆ ದ.ಕ ಜಿಲ್ಲೆಯಲ್ಲಿ ಕೆಲ ಕೈಗಾರಿಕೆ ಹೊರತುಪಡಿಸಿ ಮತ್ತೆ ಒಂದು ವಾರ ಲಾಕ್‌ಡೌನ್ ಮುಂದುವರಿಸುವ ಬಗ್ಗೆ ಮನವಿ ಮಾಡಿದ್ದೆವು. ಇದಕ್ಕೆ ಸಭೆಯಲ್ಲಿ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಒಂದು ವಾರಗಳ ಅವಧಿಗೆ ದ.ಕ ಜಿಲ್ಲೆ ಲಾಕ್‌ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ತಿಳಿಸಿದರು. ಜೂನ್ 21ರತನಕ ಲಾಕ್‌ಡೌನ್ ಇರಲಿದೆ

ಕೆಲ ಸೀಮಿತಿ ವಿಷಯಗಳಿಗೆ ರಿಯಾಯಿತಿ ಕೊಡುವ ಬಗ್ಗೆ ಶುಕ್ರವಾರದಂದು ಸಂಸದರು, ಶಾಸಕರ ಸಭೆ ಮಾಡ್ತೇವೆ. ಕೂಲಿ ಮಾಡೋರು ಮತ್ತು ಕೈಗಾರಿಕಾ ಕಾರ್ಮಿಕರಿಗೆ ನೆರವಾಗುವ ನಿಟ್ಟಿನಲ್ಲಿ ಕೆಲ ಸಡಿಲಿಕೆ ಮಾಡುವ 
ಬಗ್ಗೆ ನಾಳೆ ಸಭೆ ನಡೆಸಿ ಚರ್ಚೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

 

Related Posts

Leave a Reply

Your email address will not be published.