ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಬಾಲಕೃಷ್ಣ ರೈ (74) ನಿಧನ

ಕರಾವಳಿ ಜಿಲ್ಲೆಯಲ್ಲಿ ಬಹುಪ್ರಸಿದ್ಧಿ ಪಡೆದಿರುವ ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಕನಕಪ್ಪಾಡಿ ಬಿ . ಬಾಲಕೃಷ್ಣ ರೈ ಕದ್ರಿ ಕಂಬ್ಲ ಅವರು ಇಂದು ನಿಧನರಾದರು .
ಬಾಲಕೃಷ್ಣ ರೈ ಅವರು ಕನಕಪ್ಪಾಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರರಾಗಿಯೂ‌ ಸೇವೆ ಸಲ್ಲಿಸಿದ್ದರು .ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು . ಮೃತರುಪತ್ನಿ , ಮೂವರು ಹೆಣ್ಣು ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿರುತ್ತಾರೆ .

# ಸಂತಾಪ :
ಬಿ.ಬಾಲಕೃಷ್ಣ ರೈ ಅವರ ನಿಧನಕ್ಕೆ ದ.ಕ.ಜಿಲ್ಲಾ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಜಯಶೀಲ ಅಡ್ಯಂತಾಯ, ಪ್ರಧಾನ ಕಾರ್ಯದರ್ಶಿ ವಿ.ಕೆ‌.ಪುತ್ರನ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

Related Posts

Leave a Reply

Your email address will not be published.