ನಾಳೆಯಿಂದ ದೇಗುಲ ಓಪನ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸ್ಯಾನಿಟೈಸೇಷನ್ ಕಾರ್ಯ

ರಾಜ್ಯದ್ಯಾಂತ ಜುಲೈ 5ರಿಂದ ಅನ್‌ಲಾಕ್ 3.0 ಜಾರಿಯಲ್ಲಿರಲಿದ್ದು, ದೇವಾಲಯಗಳು ನಾಳೆಯಿಂದ ಓಪನ್ ಆಗಲಿದ್ದು, ಭಕ್ತರ ದರುಶನಕ್ಕೆ ಅವಕಾಶವನ್ನು ಕಲ್ಪಿಸಿ ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ.

ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಪೂರ್ಣ ಸ್ಯಾನಿಟೈಸೇಷನ್ ಕಾರ್ಯ ಮಾಡಲಾಗುತ್ತಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ, ಅನ್ನಛತ್ರ, ವಸ್ತು ಸಂಗ್ರಹಾಲಯದಲ್ಲಿ ದೇವಳದ ಸಿಬ್ಬಂದಿಯಿಂದ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.

ನಾಳೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕೇವಲ ದರ್ಶನಕ್ಕೆ ಮಾತ್ರ ದೇವಳದ ಆಡಳಿತ ಮಂಡಳಿ ವ್ಯವಸ್ಥೆ ಕಲ್ಪಿಸಿದೆ.

 

Related Posts

Leave a Reply

Your email address will not be published.