ಪತ್ರಕರ್ತರಿಗೆ 25 ಸಾವಿರ ಮೌಲ್ಯದ ವಸ್ತುಗಳ ಕೊಡುಗೆ:ಕಳತ್ತೂರು ಸಮಾಜ ಸೇವಾ ವೇದಿಕೆಯಿಂದ ವಿತರಣೆ

ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೆಂಟ್ ಲೈನ್ ಕೊರೋನಾ ವಾರಿಯರ್ಸ್ ಪತ್ರಕರ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರಿಗೆ ಕಾಪು-ಕಳತ್ತೂರು ಸಮಾಜ ಸೇವಾ ವೇದಿಕೆ ವತಿಯಿಂದ ಮಾಸ್ಕ್,ಛತ್ರಿ,ಸ್ಯಾನಿಟೈಸರ್ ಸೇರಿದಂತೆ ಸುಮಾರು25 ಸಾವಿರ ಮೌಲ್ಯದ ವಸ್ತುಗಳನ್ನು ಕೊಡುಗೆಯಾಗಿ ನೀಡಲಾಯಿತು.


ಈ ಸಂದರ್ಭದಲ್ಲಿ ಸಮಾಜ ಸೇವಾ ವೇದಿಕೆಯ ಅಧ್ಯಕ್ಷ ಮುಹಮ್ಮದ್ ಫಾರೂಕ್ ಚಂದ್ರನಗರ ಮಾತನಾಡಿ, ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಸುರಕ್ಷತೆ ಅತ್ಯಗತ್ಯ ಈ ನಿಟ್ಟಿನಲ್ಲಿ ಸಂಸ್ಥೆಯ ವತಿಯಿಂದ ಅಗತ್ಯ ವಸ್ತುಗಳನ್ನು ಕೊಡುಗೆಯಾಗಿ ನೀಡಲು ಸಂತೋಷವಾಗುತ್ತದೆ.ಈಗಾಗಲೇ ದಾನಿಗಳ ಸಹಕಾರದಿಂದ ಸುಮಾರು 5 ಲಕ್ಷಕ್ಕೂ ಅಧಿಕ ಮೊತ್ತದಲ್ಲಿ ಆರ್ಹ ಕುಟುಂಬಗಳಿಗೆ ಆಹಾರ ಸಮಾಗ್ರಿ ಹಾಗು ವೈದ್ಯಕೀಯ ಪರಿಕರಗಳನ್ನು ವಿತರಿಸಲಾಗಿದೆ.ಮುಂದಿನ ದಿನಗಳಲ್ಲಿ ವೇದಿಕೆಯು ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ನಿರ್ವಹಿಸಲಿದೆ ಎಂದರು.ಈ ಸಂದರ್ಭದಲ್ಲಿ ವೇದಿಕೆಯ ಮುಂದಾಳುಗಳಾದ ದಿವಾಕರ ಬಿ ಶೆಟ್ಟಿ,ಶರ್ಫುದ್ದೀನ್,ದಿವಾಕರ ಡಿ ಶೆಟ್ಟಿ, ನಾಗಭೂಷಣ್,ಜಾಹೀರ್ ಬೆಳಪು, ಕಾಪು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಕೇಶ್ ಕುಂಜೂರು,ಪ್ರದಾನ ಕಾರ್ಯದರ್ಶಿ ಮಹಮ್ಮದ್ ಶಫೀ ಉಚ್ಚಿಲ ಮತ್ತಿತರರು ಉಪಸ್ಥಿತರಿದ್ದರು.

 

 

Related Posts

Leave a Reply

Your email address will not be published.