ಪುತ್ತೂರಿನಲ್ಲಿಂದು ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ
ಪುತ್ತೂರು ಕಮ್ಯುನಿಟಿ ಸೆಂಟರ್ ಹಮ್ಮಿಕೊಂಡಿದ್ದ ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವು ಇಂದು ಪುತ್ತೂರಿನಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯ ಆಡಳಿತ ನಿರ್ದೇಶಕ ಉಮರ್ ಯು.ಹೆಚ್. ಮಾತನಾಡಿ ಸಿಇಟಿ/ನೀಟ್ ಆನ್’ಲೈನ್ ಕೌನ್ಸಿಲಿಂಗ್ ವಿಧಾನ ಮತ್ತು ಹಂತಗಳು, ದಾಖಲೆಗಳ ಪರಿಶೀಲನೆ, ಲಭ್ಯವಿರುವ ವಿವಿಧ ವಿಭಾಗದ ಸೀಟುಗಳು ಹಾಗೂ ಕರಿಯರ್ ಆಯ್ಕೆಯ ಅಗತ್ಯತೆ ಕುರಿತಂತೆ ಮಾರ್ಗದರ್ಶನ ನೀಡಿದರುಪುತ್ತೂರು ಕಮ್ಯುನಿಟಿ ಸೆಂಟರ್’ನ ಮುಖ್ಯಸ್ಥ ಹನೀಫ್ ಪುತ್ತೂರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಇಮ್ತಿಯಾಝ್ ಪಾರ್ಲೆ ಧನ್ಯವಾದವಿತ್ತರು.