ಪುತ್ತೂರಿನಲ್ಲಿ ಗಾಂಧಿ ಪ್ರತಿಮೆಗೆ ಅವಮಾನ
ಪುತ್ತೂರು: ಪುತ್ತೂರಿನ ಹೃದಯಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯನ್ನು ವಿಕೃತಗೊಳಿಸಿರುವ ಘಟನೆ ಜು.೧ರಂದು ಬೆಳಕಿಗೆ ಬಂದಿದೆ.
ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ಪ್ರತಿಮೆಯ ತಲೆಗೆ ಟೀ ಶರ್ಟ್‌ನ್ನು ಇಟ್ಟು ಗಾಂಧೀಜಿಯನ್ನು ಅವಮಾನಗೊಳಿಸಿದ್ದಾರೆ. ಪುತ್ತೂರಿನ ಗಾಂಧಿ ಕಟ್ಟೆ ಸಮಿತಿಯವರು ಪುತ್ತೂರು ನಗರ ಪೊಲೀಸ್ ಠಾಣೆಗೆ ಘಟನೆಯ ಬಗ್ಗೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ.
ಇನ್ನು ಘಟನೆಯ ಬಗ್ಗೆ ಮಾಹಿತಿ ಪಡೆದ ಪುತ್ತೂರು ಡಿವೈ ಎಸ್ ಪಿ ಡಾ. ಗಾನ ಪಿ ಕುಮಾರ್ ಮತ್ತು ಪುತ್ತೂರು ನಗರ ಠಾಣೆಯ ಸರ್ಕಲ್ ಇನ್ಸೆಪೆಕ್ಟರ್ ಗೋಪಾಲ್ ನಾಯ್ಕ್ ರವರು ಕಿಡಿಗೇಡಿಗಳ ಪತ್ತೆಯ ಕಾರ್ಯಾಚರಣೆ ನಡೆಸುತ್ತಿದ್ದಾರೆ.