ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ

ಪುತ್ತೂರು: ನಾಡಪ್ರಭು ಕೆಂಪೇಗೌಡರ ಹೆಸರಿನ ಜೊತೆಗೆ ಅವರ ಸಾಧನೆಗೂ ಬಹಳ ಮಹತ್ವವಿದ್ದು, ಅವರ ದೂರದೃಷ್ಟಿ, ಜನಪರ ಚಿಂತನೆ ಎಲ್ಲರಿಗೂ ಮಾದರಿಯಾಗಿದೆ. ಬೆಂಗಳೂರನ್ನು ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತಿಸಿದ ಕೆಂಪೇ ಗೌಡರು ಕರ್ನಾಟಕವನ್ನು ವಿಶ್ವದಾದ್ಯಂತ ಗುರುತಿಸುವಂತೆ ಮಾಡಿದ್ದಾರೆ ಎಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ಹೇಳಿದರು.ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಪುತ್ತೂರಿನ ಮಿನಿವಿಧಾನ ಸೌಧದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಕೆಂಪೇಗೌಡ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

 

ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ ಚರಿತ್ರೆ ಓದಿದವರು ಚರಿತ್ರೆ ನಿರ್ಮಾಣ ಮಾಡಬೇಕು ಎಂಬ ಸಂದೇಶ ನೀಡುವ ಸಲುವಾಗಿ ಕೆಂಪೇ ಗೌಡ ಜಯಂತಿಯನ್ನು ಆಚರಿಸಲಾಗುತ್ತಿದೆ. ಐನೂರು ವರ್ಷಗಳ ಹಿಂದೆ ದೂರದೃಷ್ಠಿಯನ್ನಿಟ್ಟುಕೊಂಡು ಬೆಂಗಳೂರಿಗೆ ಕಾಯಕಲ್ಪ ನೀಡಿರುವ ಕೆಂಪೇ ಗೌಡರ ಚಿಂತನೆ ಇಂದಿಗೂ ಪೂರಕವಾಗಿದೆ ಎಂದರು.ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ರಮೇಶ್ ಬಾಬು, ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ ಶೆಣೈ, ಡಿವೈಎಸ್‌ಪಿ ಗಾನ ಪಿ ಕುಮಾರ್, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.