ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಕಾನ್ಸಂಟ್ರೇಟರ್, ವಿಟಿಂ ಕಿಟ್ ಹಸ್ತಾಂತರ

ಪುತ್ತೂರು: ಬೆಂಗಳೂರಿನ ಭಟ್ ಬಯೋಟೆಕ್ ಹಾಗೂ ತಾಲೂಕಿನ ಶಾಂತಿಗೋಡು ಗ್ರಾಮದ ನವಚೇತನ ರಿಟೈರ್‌ಮೆಂಟ್ ಟೌನ್‌ಶಿಪ್ ವತಿಯಿಂದ ಇಲ್ಲಿಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಐದು ಆಮ್ಲಜನಕ ಕಾನ್ಸಂಟ್ರೇಟರ್ ಹಾಗೂ ಎರಡು ಸಾವಿರ ವಿಟಿಎಂ ಕಿಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.ಸರಳ ಕಾರ್ಯಕ್ರಮದಲ್ಲಿ ಭಟ್ ಬಯೋಟೆಕ್ ಸಂಸ್ಥೆಯ ಡಾ.ಶ್ಯಾಮ್ ಭಟ್ ಶಾಸಕ ಸಂಜೀವ ಮಠಂದೂರು ಅವರಿಗೆ ಆಮ್ಲಜನಕ ಕಾನ್ಸಂಟ್ರೇಟರ್‌ನ್ನು ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಆಧುನಿಕ ವೈದ್ಯೋಪಕರಣಗಳು ಹಾಗೂ ನುರಿತ ವೈದ್ಯರುಗಳಿಂದ ಪುತ್ತೂರು ಸರಕಾರಿ ಆಸ್ಪತ್ರೆ ಸುಸ್ಥಿತಿಯಲಿರುವಂತೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯಗಳು ಸರಕಾರಿ ಆಸ್ಪತ್ರೆಯಲ್ಲಿ ಸಿಗುವಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಈ ನಿಟ್ಟಿನಲ್ಲಿ ಡಾ.ಶ್ಯಾಮ್‌ಭಟ್ ಅವರ ಕೊಡುಗೆ ಕೃತಜ್ಞತಾಪೂರ್ವಕವಾಗಿದೆ ಎಂದರು.

ಈ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆಯ ಡಾ.ಜೈದೀಪ್, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್.ಗೌರಿ, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಸುರಕ್ಷಾ ಸಮಿತಿ ಅಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಸರಕಾರಿ ಆಸ್ಪತ್ರೆ ಸುರಕ್ಷಾ ಸಮಿತಿ ಸದಸ್ಯ ರಫೀಕ್ ಉಪಸ್ಥಿತರಿದ್ದರು.
ವರದಿ: ಅನೀಶ್ ಪುತ್ತೂರು

Related Posts

Leave a Reply

Your email address will not be published.