ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಕಾಂಗ್ರೆಸ್ ವತಿಯಿಂದ ಮಾಸ್ಕ್ ವಿತರಣೆ
ಪುತ್ತೂರು: ನಗರ ಕಾಂಗ್ರೆಸ್ ವತಿಯಿಂದ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಎನ್95 ಮಾದರಿಯ ಮಾಸ್ಕನ್ನು ಪತ್ರಿಕಾಭವನದಲ್ಲಿ ವಿತರಿಸಲಾಯಿತು.
ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾಸ್ಕ್‍ವಿತರಿಸಿ ಮಾತನಾಡಿ, ಕೊರೋನಾ ಸಂಕಷ್ಟ ಕಾಲದಲ್ಲಿ ಕೊರೋನಾ ವಾರಿಯರ್ಸ್ ಆಗಿ ಸಮಾಜದ ಜನರ ನಡುವೆ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸರಕಾರ ಕೊಡುಗೆಗಳನ್ನು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಮಹಮ್ಮದಾಲಿ, ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಮತ್ತಿತರರು ಉಪಸ್ಥಿತರಿದ್ದರು.