ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರಧಾನಿ  ಅವರಿಗೆ ರಕ್ಷಾ ರಾಮಯ್ಯ ಒತ್ತಾಯ ; ರಾಜ್ಯಪಾಲರಿಗೆ ನಿಯೋಗದ ಮೂಲಕ ಮನವಿ ಸಲ್ಲಿಕೆ

ಬೆಂಗಳೂರು, ನ 18; ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ.


ತಮ್ಮ ಶಾಲಾ ಒಡನಾಡಿ ಹಾಗೂ ಎಲ್ಲರ ಮೆಚ್ಚಿನ ಪುನಿತ್ ರಾಜ್ ಕುಮಾರ್ ಅವರಿಗೆ ದೇಶದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಮರಣೋತ್ತವಾಗಿ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಕ್ಷಾ ರಾಮಯ್ಯ ಪತ್ರ ಬರೆದಿದ್ದಾರೆ. ಇಂದು ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ರಕ್ಷಾ ರಾಮಯ್ಯ ನೇತೃತ್ವದ ನಿಯೋಗ ಈ ಮೂರು ಪತ್ರಗಳನ್ನು ಅವರಿಗೆ ಹಸ್ತಾಂತರಿಸಿದರು.

ಪುನಿತ್ ರಾಜ್ ಕುಮಾರ್ ಹಠಾತ್ ನಿಧನಕ್ಕೆ ನಾಡಿನ ಲಕ್ಷಾಂತರ ಜನ ಕಂಬನಿ ಮಿಡಿದಿದ್ದಾರೆ. ಅವರು ನಾಡಿನ ಸಾಂಸ್ಕೃತಿಕ ಐಕಾನ್ ಆಗಿದ್ದರು. 6 ತಿಂಗಳ ಮಗುವಾಗಿದ್ದ ಸಮಯದಿಂದಲೇ ನಟನೆ ಆರಂಭಿಸಿ ಹಲವಾರು ಚಿತ್ರಗಳಲ್ಲಿ ಮನೋಜ್ಞ ಅಭಿಯನ ನೀಡಿದ್ದರು. ತಮ್ಮ ಬ್ಯಾನರ್ ನಡಿ ಹೊಸ ಸಿನೆಮಾ ಮತ್ತು ಹೊಸ ಪ್ರತಿಭೆಗಳನ್ನು ಶೋಧಿಸಿ ಅವಕಾಶ ನೀಡುತ್ತಿದ್ದರು. ಮಕ್ಕಳು, ಹಿರಿಯ ನಾಗರಿಕರು, ಸಮಾಜದ ನಿರ್ಲಕ್ಷಿತ ಸಮುದಾಯದ ಶ್ರೇಯೋಭಿವೃದ್ಧಿಗಾಗಿಯೂ ಅವರು ಸೇವೆ ಸಲ್ಲಿಸಿದ್ದರು. ನಾಡಿನ ಹೃದಯ ಗೆದ್ದಿರುವ ಯುವ ನಾಯಕ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಎಂ.ಎಸ್. ರಕ್ಷಾ ರಾಮಯ್ಯ ಕೋರಿದ್ದಾರೆ

Related Posts

Leave a Reply

Your email address will not be published.