ಪೆಟ್ರೋಲ್-ಡೀಸೆಲ್ ಬೆಲೆಯೇರಿಕೆಗೆ ಸಿಪಿಐ(ಎಂ)ವಿರೋಧ
ಪೆಟ್ರೋಲ್ ದರವನ್ನು ಲೀಟರ್ ಗೆ ರೂ,1೦೦ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಡೀಸೆಲ್ ಹಾಗೂ ಇತರೆ ಉತ್ಪನ್ನಗಳ ದರ ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ವಿರೋಧ ವ್ಯಕ್ತಿ ಪಡಿಸಿದೆ. ಇದರಿಂದ ಅವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು ಜನರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರದ ನಿಜ ಬಣ್ಣ ಒಂದೊಂದಾಗಿ ಬಯಲಾಗುತ್ತಿದ್ದು, ಜನರು ಪ್ರತಿರೋಧ ಒಡ್ಡುತ್ತಿದ್ದಾರೆ ಎಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿ ವಸಂತ ಆಚಾರಿ ಹೇಳಿದರು.