ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗೆ ಸನ್ಮಾನ ಹಾಗೂ ಕಾರ್ಯಾಗಾರ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಗ್ರಾಮಾಂತರ ಮಂಗಳೂರು ತಾಲೂಕು, ಸಾಹಸ್ ಸಂಸ್ಥೆ ಸಹಯೋಗದಲ್ಲಿ ಪೌರ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಹಾಗೂ ಮಾಹಿತಿ ಕಾರ್ಯಾಗಾರವನ್ನ ಹಮ್ಮಿಕೊಳ್ಳಲಾಗಿತ್ತು.
ಇನ್ನು ತಾಲೂಕು ಪಂಚಾಯತ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಸರೋಜನಿ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಕೋವಿಡ್‍ನಲ್ಲೂ ಸ್ವಚ್ಚತಾ ಕಾರ್ಯಕ್ರಮದಲ್ಲಿ ತನ್ನ ಸೇವೆಯನ್ನ ನಿರಂತರವಾಗಿ ಸಲ್ಲಿಸುತ್ತಾ ಬಂದಿದ್ದಾರೆ. ಅವ್ರಿಗೆ ಕಾರ್ಯಾಗಾರ ಅಗತ್ಯವಿದೆ ಎಂದು ಅವರು ಹೇಳಿದ್ರು.
ತದ ಬಳಿಕ ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ|ನವೀನ್ ಚಂದ್ರಕುಲಾಲ್ ಅವರು ಕಾರ್ಯಾಗಾರ ನಡೆಸಿಕೊಟ್ಟರು, ಇನ್ನು ಆರೋಗ್ಯ ಕಾರ್ಯಕರ್ತೆರು ಹಾಗೂ ಪೌರ ಕಾರ್ಮಿಕರು ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳುವುದು ಅಗತ್ಯ ಎಂದು ಅವರು ಹೇಳಿದ್ರು. ಈ ವೇಳೆ ತಾಲೂಕು ಪಂಚಾಯತ್ ಮ್ಯಾನೇಜರ್ ಸುವರ್ಣ ಹೆಗ್ಡೆ, ಸಾಹಸ್ ಸಂಸ್ಥೆಯ ಸುದೇಶ್‍ಕಿಣಿ, ಸ್ವಚ್ಚ ಭಾರತ್ ಯೋಜನೆಯ ಎಚ್‍ಆರ್‍ಡಿ ಎಕ್ಸಪರ್ಟ್ ನವೀನ್, ಐಇಸಿ ಎಕ್ಸಪರ್ಟ್ ಡೊಂಬಯ್ಯ ಇಡ್ಕಿದು, ಪವನ್ ಕುಮಾರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.