ಬಂಟ್ವಾಳ: ಮಗನನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ತಂದೆ

ಬಂಟ್ವಾಳ: ತಂದೆಯೇ ತನ್ನ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. 

ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿ ನಿವಾಸಿ ಬಾಬು ನಾಯ್ಕ (58) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಸಾತ್ವಿಕ್ (15) ಕೊಲೆಯಾದ ಯುವಕ. ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ್ ಅವರು ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ ಕ್ಷುಲಕ ಕಾರಣಕ್ಕಾಗಿ ಗಲಾಟೆ ಮಾಡುತ್ತಿದ್ದರು.

ಬಾಬು ನಾಯ್ಕ್ ಅವರ ಪತ್ನಿ ಗೇರು ಬೀಜದ ಕಾರ್ಖಾನೆಗೆ ತೆರಳಿದ್ದ ವೇಳೆ ಬುಧವಾರ ಮಧ್ಯಾಹ್ನವೂ ಗಲಾಟೆ ಮಾಡಿದ್ದು ಬಳಿಕ ಮಗ ಸಾತ್ವಿಕ್‌ ನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ. ಬಳಿಕ ಆತನು ಮನೆಯ ಪಕ್ಕಾಸಿಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Related Posts

Leave a Reply

Your email address will not be published.