ಉಭಯ ಜಿಲ್ಲೆಗೆ ಸಿಎಂ ಬೊಮ್ಮಾಯಿ ಪ್ರವಾಸ
ಮಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆಗಸ್ಟ್ 12 ಮತ್ತು 13ರಂದು ಅವರು ದ.ಕ, ಉಡುಪಿ ಜಿಲ್ಲೆಗಳಲ್ಲಿ ಶಾಸಕರು, ಸಂಸದರು,ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗುರುವಾರ ಬೆಳಗ್ಗೆ 10.50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 11.30ಕ್ಕೆ ದ.ಕ. ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ದೊಂದಿಗೆ ಕೋವಿಡ್ ನಿಯಂತ್ರಣ ಕುರಿತು ಸಭೆ ಬಳಿಕ 2.30ಕ್ಕೆ ಉಡುಪಿಗೆ ತೆರಳುವರು, 3.30ಕ್ಕೆ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಶಿಲಾನ್ಯಾಸ, 4 ಗಂಟೆಗೆ ಉಡುಪಿ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಿ ರಾತ್ರಿ 8 ಗಂಟೆಗೆ ಮಂಗಳೂರಿಗೆ ಬಂದು ವಾಸ್ತವ್ಯ ಹೂಡುವರು. ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕೇರಳ ಗಡಿಭಾಗದ ಚೆಕ್ಪೋಸ್ಟ್ಗಳಿಗೆ ಭೇಟಿ ನೀಡಿ, 10.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು.