ಬಾಲಕಿ ಜತೆ ಮೊಬೈಲ್ ಮೂಲಕ ಅನುಚಿತ ವರ್ತನೆ : ಪೊಲೀಸ್ ಸಿಬ್ಬಂದಿಯ ಬಂಧನ

ಅಪ್ರಾಪ್ತ ವಯಸ್ಸಿನ ಬಾಲಕಿ ಜತೆ ಮೊಬೈಲ್  ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳ ಕಲ್ಯಾಣ ಸಮಿತಿ ಮೂಲಕ ನೀಡಲಾದ ದೂರಿನ ಮೇರೆಗೆ ಮಂಗಳೂರು ನಗರ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಈ ಕುರಿತು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ,

ನಗರದ ಪೊಲೀಸ್ ಠಾಣೆ ಪ್ರಕರಣವೊಂದಕ್ಕೆ ಸಂಬಂಧಿಸಿ ಪೋಷಕರ ಜತೆ ದೂರು ನೀಡಲು ಬಂದಿದ್ದ ಬಾಲಕಿಯಿಂದ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ದರ್ಜೆಯ ಸಿಬ್ಬಂದಿ ಆಕೆಗೆ ಕರೆ ಮಾಡಿ, ಸಂದೇಶ ಕಳುಹಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಎಂದರು.

ಸಾಕಷ್ಟು ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಸಿಬ್ಬಂದಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭ ಡಿಸಿಪಿ ಹರಿರಾಂ ಶಂಕರ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.