ಬಿಜೆಪಿ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್: ಕಾಂಗ್ರೆಸ್ ಟ್ವೀಟ್ ಮೂಲಕ ಲೇವಡಿ

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದೆನ್ನಲಾದ ಆಡಿಯೋ ಸಂಬಂಧ ಕರ್ನಾಟಕ ಕಾಂಗ್ರೆಸ್ ಪಕ್ಷ, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಎಂದು ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ ಅವರು ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ! ಕಾಮಿಡಿ ಪಾತ್ರ ಮಾಡುತ್ತಿದ್ದ ನಳಿನ್, ಈಗ ಬಿಜೆಪಿಯ ಹಲವರಿಗೆ ವಿಲ್ಲನ್ ಪಾತ್ರಧಾರಿಯಾಗಿದ್ದಾರೆ! ಎಂದು ಟ್ವೀಟ್ ಮೂಲಕ ಟೀಕಿಸಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ! ಪಕ್ಷದ ರಾಜ್ಯಾಧ್ಯಕ್ಷರಾಗಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಸಚಿವ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಏಕೆಂದರೆ ಸಂಚಿನ ಸೂತ್ರದಾರನೇ ನಳಿನ್ ಕುಮಾರ್ ಕಟೀಲ್ ಆಗಿದ್ದರೂ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಆರೋಪಿಸಿದೆ.

 

Related Posts

Leave a Reply

Your email address will not be published.