ಬೆಲೆಯೇರಿಕೆಯ ವಿರುದ್ಧ ಮಂಗಳೂರಿನಲ್ಲಿ ವಿಸ್ತಾರಗೊಳ್ಳುತ್ತಿರುವ ಚಳುವಳಿ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಗಳು ವಿಪರೀತವಾಗಿ ಹೆಚ್ಚಿದ್ದು,ಅದರ ಜೊತೆಗೆ ವಿದ್ಯುತ್ ದರವನ್ನು ಕೂಡ ಹೆಚ್ಚಿಸಿ ಜನಸಾಮಾನ್ಯರ ಬದುಕಿಗೆ ಕೊಡಲಿ ಪೆಟ್ಟನ್ನು ನೀಡಿದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ಧಿಕ್ಕರಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು,ಇಂದು ಕುಲಶೇಖರ ಹಾಗೂ ಜಪ್ಪಿನಮೊಗರುನಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಕಾರರನ್ನುದ್ದೇಶಿಸಿ CPIM ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ,ಜನರ ಬದುಕಿನ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ ಬಿಜೆಪಿ, ಇಂದು ದೇಶ ಹಾಗೂ ರಾಜ್ಯವನ್ನು ಆಳುತ್ತಿರುವುದು ವಿಪರ್ಯಾಸವಾಗಿದೆ. ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡುವ ಮೂಲಕ ದೇಶದ ಆರ್ಥಿಕತೆಯನ್ನೇ ಬುಡಮೇಲುಗೊಳಿಸಿದೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ CPIM ಜಿಲ್ಲಾ ನಾಯಕರಾದ ಜಯಂತಿ ಶೆಟ್ಟಿ, ನಗರ ಮುಖಂಡರಾದ ದಿನೇಶ್ ಶೆಟ್ಟಿ, ಸ್ಥಳೀಯ ನಾಯಕರಾದ ಶಶಿಕಲಾ,ವಸಂತಿ,ಮೀನಾ, ಜಯಲಕ್ಷ್ಮಿ, ಮನೋಜ್ ಶೆಟ್ಟಿ, ಅಭಿಷೇಕ್, ಹನೀಫ್,ದೇವಪ್ಪ, ಸುಂದರ,ಮುಂತಾದವರು ಹಾಜರಿದ್ದರು.

Related Posts

Leave a Reply

Your email address will not be published.