ಬೆಳ್ತಂಗಡಿಯಲ್ಲಿ ಅಕ್ರಮ ಮರಳು ಅವ್ಯವಹಾರ ಸೂಕ್ತ ತನಿಖೆ : ವಸಂತ ಬಂಗೇರರಿಂದ ಡಿಸಿಗೆ ಮನವಿ
ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮ ಮರಳು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಇದನ್ನು ಕೂಡಲೇ ತನಿಖೆ ಮಾಡುವಂತೆ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅವರು ಮಾಧ್ಯಮದ ಜೊತೆ ಮಾತನಾಡಿ ಬೆಳ್ತಂಗಡಿಯ ಧರ್ಮಸ್ಥಳ ಆಸು ಪಾಸು ದಿನಕ್ಕೆ ಸುಮಾರು 500 ಲೋಡಿಗಿಂತ ಅಧಿಕ ಮರಳು ಸಾಗಾಣಿಕೆ ಮೂಲಕ ಅನೇಕ ಅವ್ಯವಹಾರಗಳು ನಡೆಯುತ್ತಿದೆ. ಪರವಾನಿಗೆ ಇಲ್ಲದೆ ಮರಳು ಗಣಿಗಾರಿಕೆ ನಡೆಯುತ್ತಿದ್ದು ದೂರದ ಊರುಗಳಿಗೆ ಮರಳು ಸಾಗಣೆ ಆಗುತ್ತಿದೆ ಇದಕ್ಕೆ ಪೆÇಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಇದಕ್ಕೆಲ್ಲ ಕೂಡಲೇ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ,ಅವರು ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಹೇಳಿದರು.