ಬೇಲೂರಿನಲ್ಲಿ ವಲಯ ಅರಣ್ಯಾಧಿಕಾರಿಗಳಿಂದ ದಾಳಿ
ಬೇಲೂರು ವಲಯ ಅರಣ್ಯಾಧಿಕಾರಿ ಯಶ್ಮ ಮಾಚಮ್ಮ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕಾಡುಪ್ರಾಣಿ ಬೇಟೆಯಾಡಲು ಬಳಸಿದ್ದ 3 ಬಂಧೂಕು, 3 ದ್ವಿಚಕ್ರ ವಾಹನ ಹಾಗೂ ಒಂದು ಆಲ್ಟೋ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬೇಲೂರು ವಲಯ ಕಲ್ಲಳ್ಳಿ ಅರಣ್ಯ ಮೀಸಲು ಪ್ರದೇಶದಲ್ಲಿ ಕಾಡುಪ್ರಾಣಿ ಬೇಟೆಯಾಡಲು ಸಂಚುರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದರು. ಬೇಟೆಯಾಡಲು ಬಳಸಿದ್ದ ಬಂಧೂಕು ಹಾಗೂ ವಾಹನಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಯಶ್ಮ ಮಾಚಮ್ಮ, ಉಪವಲಯ ಅರಣ್ಯಾಧಿಕಾರಿಗಳಾದ ಅರ್ಜುನ್, ಸುಭಾಷ್, ಪ್ರಕಾಶ್ ಚಂದನ್, ದಿಲೀಪ್, ಪ್ರಕಾಶ್, ಲಿಂಗೇಶ್, ಹರೀಶ್, ಲಕ್ಷ ಮಣ್ ಹಾಜರಿದ್ದರು.