ಬೈಕಂಪಾಡಿ : ಕಮಿಷನರ್ ಗೆ ಮೆಸೇಜ್ ಮಾಡಿ ದಂಪತಿ ಆತ್ಮಹತ್ಯೆ
ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ ನಿವಾಸಿಗಳು. ಆರ್ಯ ಸುವರ್ಣ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಗುಣ ಆರ್. ಸುವರ್ಣ ಡೆತ್ ನೋಟ್ ಬರೆದಿದ್ದು ಅದರಲ್ಲಿ ತಾವು ಆತ್ಮಹತ್ಯೆ ಮಾಡಲು ಕಾರಣವನ್ನು ಬರೆದಿದ್ದಾರೆ.
ಸುಮಾರು 10ದಿನಗಳಿಂದ ಕೋವಿಡ್ ಬಾಧಿಸಿದ್ದು, ಅದು ವಿಕೋಪಕ್ಕೆ ಹೋಗಿ ಬ್ಲಾಕ್ ಫಂಗಸ್ ಭಯ ಕಾಡಿದೆ. ಗಂಡನಿಗೂ 3 ದಿನದಿಂದ ಕೋವಿಡ್ ಲಕ್ಷಣಗಳು ಕಂಡು ಬರುತ್ತಿದೆ. ಈ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ಬರೆದಿದ್ದಾರೆ. ಆತ್ಮಹತ್ಯೆಗೂ ಮೊದಲು ಪತಿ ರಮೇಶ್ ಸುವರ್ಣ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ವಾಯ್ಸ್ ಮೆಸೇಜ್ ಕಳಿಸಿದ್ದುಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಹೇಳಿಕೊಂಡಿದ್ದರು . ಶಶಿಕುಮಾರ್ ಅವರು ಕೂಡಲೇ ಕಾರ್ಯ ಪೃವೃತ್ತರಾಗಿ ದುಡುಕಿನ ನಿರ್ಧಾರ ಮಾಡದಂತೆ ಮನವಿ ಮಾಡಿದ್ದರು. ತಕ್ಷಣ ಪೊಲೀಸರ ತಂಡ ಕಳುಹಿಸಿದರೂ ಅದಾಗಲೇ ದಂಪತಿ ನೇಣಿಗೆ ಶರಣಾಗಿದ್ದರು.