ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ: ಮಂಗಳೂರು ವಿವಿ ಕುಲಪತಿ ತಂಡ ಚಾಂಪಿಯನ್

ಮಂಗಳೂರು: ಮಂಗಳೂರು ವಿವಿ ಕುಲಪತಿ ತಂಡ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.


ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಫೈನಲ್ ನಲ್ಲಿ ಮೀಡಿಯಾ ಗ್ರಾಮೀಣ ತಂಡವನ್ನು ಮಣಿಸಿ ಟ್ರೋಫಿಯನ್ನು ಎತ್ತಿಕೊಂಡಿದೆ.
ಶನಿವಾರ ಸಂಜೆ ನಡೆದ ಸಮಾರಂಭದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಬಹುಮಾನ ವಿತರಿಸಿದರು. ಕುಲಪತಿ ಇಲೆವೆನ್ ನ ಸಂದೀಪ್ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ, ಅಶ್ವಥ್ ಬೆಸ್ಟ್ ಬ್ಯಾಟ್ಸ್‌ಮನ್, ಮತ್ತು ಮೀಡಿಯಾ ರೂರಲ್ ತಂಡದ ಪುನೀತ್ ಬೆಸ್ಟ್ ಬೌಲರ್ ಪ್ರಶಸ್ತಿಯನ್ನು ಪಡೆದರು.
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ಇದರ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆರ್.ರಾಮಕೃಷ್ಣ, ಕೆಯುಡಬ್ಲ್ಯುಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು.

Related Posts

Leave a Reply

Your email address will not be published.