ಮಂಗಳೂರಲ್ಲಿ ಮಹಿಳೆಯ ಚಿನ್ನದ ಸರ ಎಳೆದು ದುಷ್ಕರ್ಮಿ ಪರಾರಿ
ಮಂಗಳೂರಿನ ಯೆಯ್ಯಾಡಿಯ ಬಾರೆಬೈಲ್ನಲ್ಲಿ ನಡೆದು ಹೋಗುತ್ತಿದ್ದ ವಿ೪ನ್ಯೂಸ್ನ ಪತ್ರಕರ್ತೆ ಕಾವ್ಯ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಯೋರ್ವ ಎಳೆದು ಪರಾರಿಯಾದ ಘಟನೆ ನಡೆದಿದೆ.
ಶುಕ್ರವಾರ ರಾತ್ರಿ ವೇಳೆ ಕಚೇರಿಯಿಂದ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಯೋರ್ವ ಬೈಕ್ನಲ್ಲಿ ಆಗಮಿಸಿ, ಆಕೆಯ ಕುತ್ತಿಯಲ್ಲಿದ್ದ ಚಿನ್ನದ ಸರವನ್ನ ದೋಚಿ ಪರಾರಿಯಾಗಿದ್ದಾನೆ. ಸರವನ್ನು ಎಳೆಯುವ ಸಂದರ್ಭದಲ್ಲಿ ರಸ್ತೆಗೆ ಉರುಳಿ ಬಿದ್ದು ಗಾಯಗೊಂಡಿರುತ್ತಾರೆ. ಘಟನೆ ಬಳಿಕ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿದರು.
ಬಳಿಕ ಕಾವ್ಯಾ ಅವರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯ್ತು. ಇನ್ನು ಸ್ಥಳಕ್ಕೆ ಡಿಸಿಪಿ ಹರಿರಾಂ ಶಂಕರ್, ಹಿರಿಯ ಪೊಲೀಸರು ಸೇರಿದಂತೆ ಅಧಿಕಾರಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಕುರಿತು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿ, ವಿ೪ನ್ಯೂಸ್ಗೆ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನ ಪತ್ತೆ ಮಾಡಲಾಗುವುದು.ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗುವುದು ಎಂದು ಅವರು ಹೇಳಿದರು.