ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭ ವಿಚಾರ : ಸಿಎಂ ಬಸವರಾಜ್ ಬೊಮ್ಮಾಯಿ
ಮಂಗಳೂರು: ಕರಾವಳಿಯಲ್ಲಿ ಉಗ್ರರ ನಂಟಿನ ಬಗ್ಗೆ ಎನ್‍ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ ಬಳಿಕ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸಲು ಆಗ್ರಹ ಕೇಳಿ ಬಂದಿತ್ತು. ಇದೀಗ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸುವ ಕುರಿತಂತೆ ಸಭೆಗಳು ನಡೆದಿವೆ ಎಂದು ಎನ್‍ಐಎ ಕಚೇರಿ ಆರಂಭಿಸುವ ಸಾಧ್ಯತೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಎನ್‍ಐಎ ಕುರಿತಂತೆ ಅವರು ಈಗಾಗಲೇ ಎರಡು ಮೀಟಿಂಗ್ ಮಾಡಿದ್ದು, ಮುಂದೆಯೂ ಕೆಲ ಸಭೆ ನಡೆಯಲಿದೆ. ಮುಂಬರುವ ದಿನಗಳಲ್ಲಿ ಗೃಹ ಸಚಿವರು ಇಲ್ಲಿಗೆ ಭೇಟಿ ಕೊಟ್ಟು ಪರಿಶೀಲಿಸ್ತಾರೆ ಎಂದರು. ಆ ಬಳಿಕ ನಾವೆಲ್ಲರೂ ಒಟ್ಟಾಗಿ ಚರ್ಚಿಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ತೇವೆ. ಈ ಬಗ್ಗೆ ಕೆಲವು ವಿಚಾರಗಳನ್ನು ನಾವು ಬಹಿರಂಗ ಪಡಿಸಲು ಆಗಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದರು.