ಮಂಗಳೂರಿನಲ್ಲಿ ಎನ್.ಐ.ಎ ಕಚೇರಿ ಸ್ಥಾಪಿಸುವ ಬಗ್ಗೆ ಕೇಂದ್ರದ ಜತೆ ಚರ್ಚೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಎನ್‍ಐಎ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಅಪ್ಘಾನಿಸ್ತಾನದಲ್ಲಿ ಕನ್ನಡಿಗರು ಅತಂತ್ರ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು ಕೇಂದ್ರ ಸರ್ಕಾರದಿಂದ ಕರೆತರುವ ವ್ಯವಸ್ಥೆಯಾಗುತ್ತಿದೆ. ರಾಜ್ಯದಿಂದ ನೋಡಲ್ ಅಫೀಸರ್ ನೇಮಕ ಮಾಡಿದ್ದೇವೆ ಸಿಐಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದೇವೆ. ಈ ಹಿಂದೆ ವಿದೇಶದಲ್ಲಿ ಅತಂತ್ರರಾಗಿದ್ದ ಕನ್ನಡಿಗರನ್ನು ಕರೆ ತಂದಿದ್ದಾರೆ. ಸಂಕಷ್ಟದಲ್ಲಿದ್ದವರು ಅವರನ್ನು ಸಂಪರ್ಕ ಮಾಡಬಹುದು ಎಂದು ಹೇಳಿದರು.

Related Posts

Leave a Reply

Your email address will not be published.