ಮಂಗಳೂರಿನಲ್ಲಿ ಖಾಸಗಿ ಬಸ್ ದರ ಏರಿಕೆ ಖಂಡಿಸಿ ಪ್ರತಿಭಟನೆ
ಖಾಸಗಿ ಬಸ್ ದರ ಏರಿಕೆಯನ್ನು ಖಂಡಿಸಿ ಡಿವೈಎಫ್ಐ, ಸಿಪಿಐಎಮ್ ಮತ್ತು ಜೆಎಮ್ಎಸ್ ಸಂಘಟನೆಗಳ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ಖಾಸಗಿ ಬಸ್ ದರ ಏರಿಕೆಯನ್ನು ಮಾಡಿ ಮತ್ತಷ್ಟು ಸಂಕಷ್ಠಕ್ಕೆ ತಳ್ಳಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಮ್ ಜಿಲ್ಲಾ ಮುಂಡರಾದ ಬಾಲಕೃಷ್ಣ ಶೆಟ್ಟಿ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜೆಎಮ್ಎಸ್ ಮಹಿಳಾ ಮುಖಂಡರಾದ ಜಯಂತಿ ಬಿ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.