ಮಂಗಳೂರಿನಲ್ಲಿ ಬೆಲೆ ಏರಿಕೆ ವಿರುದ್ಧ ಸಿಪಿಐಎಂ ಪ್ರತಿಭಟನೆ

ಅಚ್ಚೇದಿನ್ ಹೆಸರಿನಲ್ಲಿ ದೇಶವನ್ನೇ ಸರ್ವನಾಶಗೊಳಿಸಿದ ನರೇಂದ್ರ ಮೋದಿ ಸರಕಾರ.
ಅಚ್ಚೇದಿನ್ ತರುವುದಾಗಿ, ಬೆಲೆಯೇರಿಕೆಯನ್ನು ನಿಯಂತ್ರಿಸುವುದಾಗಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ಬೊಗಳೆ ಬಿಟ್ಟು, ದೇಶದ ಜನತೆಗೆ ಮಂಕುಬೂದಿ ಎರಚಿ, ಕಳೆದ 7 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ದಿವಾಳಿನಂಚಿಗೆ ಕೊಂಡೊಯ್ದು, ಜನರ ಬದುಕನ್ನೇ ಸರ್ವನಾಶ ಮಾಡಿದ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರದ ವಿರುದ್ಧ ಪ್ರಬಲ ಜನಚಳುವಳಿ ಬೆಳೆದು ಬರುವ ಮೂಲಕ ದೇಶವನ್ನು ರಕ್ಷಿಸಲು ಜನತೆ ಒಂದಾಗಿ ನಿಲ್ಲಬೇಕಾಗಿದೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಜನತೆಗೆ ಕರೆ ನೀಡಿದರು.

ಅವರು ಬೆಲೆಯೇರಿಕೆಯ ವಿರುದ್ಧ ಸಿಪಿಐಎಂ ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆ ಕಾರ್ಯಕ್ರಮದ ಭಾಗವಾಗಿ ಉರ್ವಾಸ್ಟೋರ್ ನಲ್ಲಿ ಜರುಗಿದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನಾ ಸಭೆಯಲ್ಲಿ ಸಿಪಿಐಎಂ ಹಿರಿಯ ಮುಖಂಡರಾದ ಅಶೋಕ್ ಶ್ರೀಯಾನ್, ಶ್ಯಾಮುವೆಲ್ ಟೈಟಸ್, ದಿನೇಶ್ ಶ್ರೀಯಾನ್, ಸರೋಜಿನಿ, ಸಿಪಿಐಎಂ ಯುವ ನಾಯಕರಾದ ಮನೋಜ್, ಪ್ರಶಾಂತ್ ಎಂ.ಬಿ, ನಾಗೇಂದ್ರ, ರಘುವೀರ್, ರಾಜೇಶ್, ಇಕ್ಬಾಲ್, ಸುಖೇಶ್, ಸನತ್ ಮುಂತಾದವರು ಹಾಜರಿದ್ದರು.

Related Posts

Leave a Reply

Your email address will not be published.