ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ ಸಮಾರಂಭವೂ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕೆಪಿಸಿಸಿ ಹಿಂದುಳಿದ ವರ್ಗ ಗಳ ವಿಭಾಗ ರಾಜ್ಯಾಧ್ಯಕ್ಷ ಎಂ.ಡಿ. ಲಕ್ಷ್ಮೀ ನಾರಾಯಣ ಅವರು ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗ ಅಧ್ಯಕ್ಷ ವಿಶ್ವಾಸ್ ಕುಮಾರ್ ಅವರಿಗೆ ಪಕ್ಷದ ಧ್ವಜವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.
ಹಿಂದುಳಿದ ವರ್ಗವನ್ನು ಬಲಿಷ್ಠವಾಗಿ ಕಟ್ಟುತ್ತೇನೆ- ವಿಶ್ವಾಸ್ ಕುಮಾರ್ ದಾಸ್
ಪಕ್ಷದ ನಾಯಕರು ಕೊಟ್ಟಿರುವ ಹುದ್ದೆಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ. ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗಕ್ಕೆ ಆಗುತ್ತಿರುವ ಅನ್ಯಾಯ ವಿರುದ್ದ ಹೋರಾಟ ಮಾಡುತ್ತೇನೆ. ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು.ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಭೇಟಿ ಮಾಡಿ , ಪಕ್ಷವನ್ನು ಬಲವರ್ಧನೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ಅವರು ಹೇಳಿದರು.