ಮಂಗಳೂರಿನ ಜಪ್ಪಿನಮೊಗರು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ: ಸಾಧಕ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ

ಅಂತರ್ಜಾಲ ಮೂಲಕ ಶಿಕ್ಷಣ ಪಡೆಯುವ ಕಾಲ ಇಷ್ಟು ಬೇಗ ಬರುತ್ತದೆ ಎನ್ನುವ ಭಾವನೆ ಇರದಿದ್ದರೂ ಕೋವಿಡ್‌ನಿಂದಾಗಿ ಅಂತಹ ಪರಿಸ್ಥಿತಿ ಬಂದಿದೆ. ಕೆಲವು ಭಾಗದಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಎದುರಾಗಿದ್ದು, ಪರಿಹಾರ ನಿಟ್ಟಿನಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆಶ್ರಯದಲ್ಲಿ ಭಾನುವಾರ ಜಪ್ಪಿನಮೊಗರು ಪ್ರೆಸ್ಟೀಜ್ ಶಾಲಾ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ನಮ್ಮನ್ನು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಮೇಲ್ಪಂಕ್ತಿ ಹಾಕಿಕೊಂಡಾಗ ಸಮಾಜ, ದೇಶವೇ ಗುರುತಿಸುವುದರಿಂದ ಮುಂದಿನ ಪೀಳಿಗೆಗೂ ನಮ್ಮ ಹೆಸರು ಶಾಶ್ವತವಾಗಿ ಉಳಿಯುತ್ತದೆ ಎನ್ನುವುದಕ್ಕೆ ಡಾ.ಸರ್ವಪಳ್ಳಿ ರಾಧಾಕೃಷ್ಣನ್ ಉದಾಹರಣೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಧಕ ಶಿಕ್ಷಕರು, ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಅಲೆಮಾರಿ- ಅರೆಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಕುಮಾ ರ್, ಜಿ.ಪಂ. ಮಾಜಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮನಪಾ ಸದಸ್ಯೆ ವೀಣಾ ಮಂಗಳ, ಶಿಕ್ಷಣ ಶಿಕ್ಷಕ ಮಹಾವಿದ್ಯಾಲಯದ ಸಹನಿರ್ದೇಶ ಕ ಡಾ.ಸಿಪ್ರಿಯನ್ ಮೊಂತೆರೋ, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಡಾ.ಪ್ರಶಾಂತ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಲಕ್ಷ್ಮಿ ಕೆ., ಅನುದಾನಿತ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಂ.ಕೆ. ಮಂಜನಾಡಿ, ತಾಲೂಕು ಅಧ್ಯಕ್ಷ ಎಂ.ಎಚ್.ಮಲಾರ್, ಮಂಗಳೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ತ್ಯಾಗಂ ಹರೇಕಳ, ಕಾರ್ಯದರ್ಶಿ ಲಿಲ್ಲಿ ಪಾಯಸ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸ್ಟ್ಯಾನಿ ತಾವ್ರೋ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಶಂಕರ್ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಣ ಇಲಾಖೆ ಉಪನಿರ್ದೇಶಕ ಮಲ್ಲೇಸ್ವಾ ಮಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜಲಕ್ಷ್ಮಿ ಕೆ. ವಂದಿಸಿದರು. ಮೋಹನ್ ಶಿರ್ಲಾಲ್ ಮತ್ತು ಗೀತಾ ಸಲ್ದಾನ ಕಾರ್ಯಕ್ರಮ ನಿರೂಪಿಸಿದರು.

Related Posts

Leave a Reply

Your email address will not be published.