ಮಂಗಳೂರು: ಅಪ್ರಾಪ್ತ ಬಾಲಕಿಯ ಶವ ಚರಂಡಿಯಲ್ಲಿ ಪತ್ತೆ
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ.
ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೊಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಬಾಲಕಿಯನ್ನು ಬದುಕಿಸುವ ಕೊನೆಯ ಪ್ರಯತ್ನ ಎಂಬಂತೆ ಎನ್ನುವ ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ, ಬಾಲಕಿ ಅದಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ಇನ್ನೂ ಬಾಲಕಿಯನ್ನು ಯಾರು ಹತ್ಯೆ ಮಾಡಿದ್ದಾರೆ ಎನ್ನುವ ಬಗ್ಗೆ ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಇನ್ನೂ ಕಾರ್ಖಾನೆಯ ಕಾರ್ಮಿಕರೇ ಈ ಕೃತ್ಯ ನಡೆಸಿದ್ದಾರೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದರಿಂದಾಗಿ ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ.