ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು.

ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು ಸಂಭ್ರಮದಿಂದ ನಡೆಯಲಿ ಎಂದ ಅವರು, ಮಂಗಳೂರು ಮಹಾನಗರ ಪಾಲಿಕೆಯ ರಾಜಬೀದಿಯ ಅಲಂಕಾರವನ್ನು ವಹಿಸಿದೆ. ಈ ಬಾರಿ ಮಂಗಳೂರು ಮಹಾ ನಗರ ಪಾಲಿಕೆ ವಹಿಸಿದ್ದು ಇದು ಉತ್ತಮ ಬೆಳವಣಿಗೆ. ಮೈಸೂರು ದಸರಾ ರೀತಿಯಲ್ಲಿ ಮಂಗಳೂರು ದಸರಾ ನಡೆಯುತ್ತಿದೆ ಎಂದು ಅವರು ಹೇಳಿದರು.

ಇಂದಿನಿಂದ ಅ.16 ರವರೆಗೆ ನಡೆಯಲಿರುವ ನವರಾತ್ರಿ ಉತ್ಸವದ ಅಂಗವಾಗಿ ಕುದ್ರೋಳಿ ಕ್ಷೇತ್ರದಲ್ಲಿ ನವ ದುರ್ಗೆಯರು, ಗಣಪತಿ ಹಾಗೂ ಶಾರದಾ ಮಾತೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು. ಕ್ಷೇತ್ರದ ಅಂಗಣದಲ್ಲಿ ಮೂರ್ತಿಗಳ ಪ್ರದಕ್ಷಿಣೆ ನಡೆಸಿ ಬಳಿಕ ದಸರಾ ದರ್ಬಾರು ಮಂಟಪದಲ್ಲಿ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಸಲಾಯಿತು

ಆನಂತರ ಕುದ್ರೋಳಿ ಕ್ಷೇತ್ರಾಡಳಿತ ಮಂಡಳಿಯ ಕೋಶಾಧಿಕಾರಿ ಪದ್ಮರಾಜ್ ಆರ್ ಅವರು, ಮಂಗಳೂರು ದಸರಾ ಇದು ಜನರ ದಸರಾ. ಈ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ ಎಂದು ಹೇಳಿದರು.

ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಕ್ಷೇತ್ರಾಡಳಿತ ಸಮಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಮೂಡ ಅಧ್ಯಕ್ಷ ರವಿಶಂಕರ ಮಿಜಾರು, ಹರಿಕೃಷ್ಣ ಬಂಟ್ವಾಳ, ಶಶಿಧರ ಹೆಗ್ಡೆ, ಪದ್ಮ ರಾಜ್ ಮೊದಲಾದವರು ಉಪಸ್ಥಿತರಿದ್ದರು.

 

Related Posts

Leave a Reply

Your email address will not be published.