ಮಂಗಳೂರು ಬಾಲಕಿಯ ಹತ್ಯೆ ಪ್ರಕರಣ – 20 ಮಂದಿ ಪೊಲೀಸರ ವಶಕ್ಕೆ

ಮಂಗಳೂರು ಪರಾರಿಯ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು 20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ರಾಜ್ ಟೈನ್ಸ್ ಹೆಂಚಿನ ಕಾರ್ಖಾನೆಯ ಕಾರ್ಮಿಕರೊಬ್ಬರ 8 ವರ್ಷದ ಮಗುವನ್ನು ಭಾನುವಾರ ಅಪಹರಿಸಿ ಹತ್ಯೆ ನಡೆಸಿ ಚರಂಡಿಗೆಸೆಯಲಾಗಿತ್ತು. ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದಾಗಿ ಕಾರ್ಮಿಕರೆಲ್ಲರೂ ಅಲ್ಲೇ ವಾಸವಿದ್ದರು ಎನ್ನಲಾಗಿದೆ. ಈ ವೇಳೆ ಬಾಲಕಿಯನ್ನು ಅಪಹರಿಸಿ ದುಷ್ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರಕರಣದ ಆರೋಪಿಗಳ ಪತ್ತೆಗೆ ಮಂಗಳೂರು ಪೊಲೀಸರು ಸ್ಥಳೀಯ ಸಿಸಿ ಟಿವಿ ಫುಟೇಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.