ಮಂಜೇಶ್ವರ: ಡಾ. ಡಿ. ಕೆ ಚೌಟರ 2ನೇ ವರ್ಷದ “ನೆನಪು” ಕಾರ್ಯಕ್ರಮ
ಮಂಜೇಶ್ವರ : ಜಮೀನ್ದಾರ್ ಕುಟುಂಬ ಹಿನ್ನೆಲೆಯಿಂದ ಬಂದರೂ ಬದುಕನ್ನು ನೊಂದವರ, ಶೋಷಿತರ ದನಿಯನ್ನಾಗಿಸಿದ ಕಲಾಪ್ರೇಮಿ, ರಂಗಕರ್ಮಿ,ಸಾಹಿತಿ, ಸಾಂಸ್ಕೃತಿಕ ರಾಯಭಾರಿ ದಿ. ಡಾ. ಡಿ. ಕೆ ಚೌಟರ 2ನೇ ವರ್ಷದ “ನೆನಪು” ಕಾರ್ಯಕ್ರಮ ಮಂಜೇಶ್ವರ ದ ಗೋವಿಂದ ಪೈ ನಿವಾಸ ’ಗಿಳಿವಿಂಡು’ನಲ್ಲಿ ನಡೆಯಿತು.ರಾಷ್ಟ್ರಕವಿಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ, ಸಾಮಾಜಿಕ ಮುಂದಾಳು ಕೆ. ಆರ್. ಜಯಾನಂದ ನೆನಪಿನ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ಮಂಜೇಶ್ವರ ತಾಲೂಕು ಅನನ್ಯ ಪ್ರತಿಭೆಗಳ ತವರು. ಅವರೀ ನೆಲಕ್ಕೆ ನೀಡಿದ ಕೊಡುಗೆ ಅನನ್ಯ. ಆದರೆ ಅವರ ಕೊಡುಗೆ ದಾಖಲಿಸಿ, ಸ್ಮರಿಸುವ ಮತ್ತು ಕೈ ದಾಟಿಸುವ ಪ್ರಕ್ರಿಯೆ ನಡೆಯದಿರುವುದು ದುರಂತ ಎಂದರು. ಡಿ. ಕೆ ಚೌಟರಂತಹ ಮೇಧಾವಿಗಳ ಕೊಡುಗೆ ಅತ್ಯಪಾರ. ಗೋವಿಂದ ಪೈ ಸಮಿತಿಗೆ ಅವರು ಬೆನ್ನೆಲುಬಾಗಿದ್ದರೆಂದು ಸ್ಮರಿಸಿದರು.
ಹಿರಿಯ ಪತ್ರಕರ್ತ, ಕಣಿಪುರ ಮಾಸಿಕದ ಸಂಪಾದಕ ಎಂ. ನಾ. ಚಂಬಲ್ತಿಮಾರ್ ಮುಖ್ಯ ಅತಿಥಿಯಾಗಿ ಡಾ. ಡಿಕೆ ಚೌಟರನ್ನು ನೆನಪಿಸಿದರು.
ಕೇರಳ ತುಳು ಅಕಾಡೆಮಿ ಅಧ್ಯಕ್ಷ ಉಮೇಶ್ ಸಾಲಿಯಾನ್, ಹಿರಿಯ ರಂಗಕರ್ಮಿಕೇರಳ ತುಳು ಅಕಾಡೆಮಿ ಸದಸ್ಯ ಬಾಲಕೃಷ್ಣ ಶೆಟ್ಟಿಗಾರ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದಿನೇಶ್ ಕೊಡಂಗೆ, ಬಿ. ಎಂ. ರಾಮಯ್ಯ ಶೆಟ್ಟಿ ಲೈಬ್ರರಿ ಅಧ್ಯಕ್ಷ ಪ್ರಭಾಕರ ಶೆಟ್ಟಿ, ನಿವೃತ್ತ ವಿಜ್ಞಾನಿ ವಾಸುದೇವ ಕಣ್ವತೀರ್ಥ, ಸಾಮಾಜಿಕ ಮುಂದಾಳು ಮೊಯ್ದೀನಬ್ಬ, ಉದ್ಯಾವರ ಮಾಡ ದೈವಸ್ಥಾನದ ಟ್ರಸ್ಟಿ ಬಿ. ಎನ್. ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.