ಮಂತ್ರಿಮಂಡಲದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಸ್ಥಾನ ನೀಡಲು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ

ಮಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಹಿರಿಯ ರಾಜಕಾರಣಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ ಮಾಡಿದೆ.

ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕ ರಾಜ್ಯ ಕಂಡ ಬಲು ಅಪರೂಪದ ರಾಜಕೀಯ ರತ್ನ ಹಾಲಾಡಿ ಶ್ರೀನಿವಾಸ ಶೆಟ್ಟರು. ಶ್ವೇತ ಚಾರಿತ್ರ್ಯದ ಮಾನ್ಯರ ರಾಜಕೀಯ ಶೈಲಿಯೇ ಅನ್ಯರಿಗೆ ಮಾದರಿ. ಸರಳ ಸಜ್ಜನಿಕೆ, ನೇರ ನಡೆ ನುಡಿಯ ವ್ಯಕ್ತಿತ್ವ ಉಳ್ಳವರು. ಅವರ ಕ್ಷೇತ್ರದ ಅಭಿವೃದ್ದಿಯೇ ಅವರ ಜೀವನ ಮಂತ್ರ. ಐದು ಬಾರಿ ಶಾಸಕರಾಗಿ ಕುಂದಾಪುರ ಕ್ಷೇತ್ರದ ಕಣ್ಮಣಿಯಾಗಿ, ಜಾತಿ ಮತ ಮೀರಿ ಬೆಳೆದ ಕರ್ನಾಟಕದ ನಿಷ್ಠಾವಂತ ರಾಜಕಾರಣಿ ಎಂದು ಗುರುತಿಸಿಕೊಂಡಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರಿಗೆ ಕರ್ನಾಟಕ ಸರಕಾರದ ನೂತನ ಮಂತ್ರಿಮಡಲದಲ್ಲಿ ಮಂತ್ರಿ ಸ್ಥಾನ ನೀಡಬೇಕು ಎಂದು ಜಾಗತಿಕ ಬಂಟರ ಸಂಘದ ಒಕ್ಕೂಟ ಸರಕಾರಕ್ಕೆ ಒತ್ತಾಯಿಸಿದೆ.

ಕುಂದಾಪುರದ ವಾಜಪೇಯಿ ಎಂದು ಗುರುತಿಸಿಕೊಂಡಿರುವ ಶ್ರೀನಿವಾಸ್ ಶೆಟ್ಟಿ ಅವರಿಗೆ ಎಸ್ ಆರ್ ಬೊಮ್ಮಾಯಿ ಅವರ ಮಂತ್ರಿಮಂಡಲದಲ್ಲೊಂದು ಸ್ವಾನ ನೀಡಲೇಬೇಕೆಂದು ಸಮಸ್ತ ಬಂಟರ ಸಮಾಜದ ಪರವಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಭಾರತೀಯ ಜನತಾ ಪಕ್ಷದ ವರಿಷ್ಠರಿಗೆ ಮನವಿಯನ್ನು ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಗೌರವ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ,ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಜೊತೆ ಕೋಶಧಿಕಾರಿ ಸಂಕಬೈಲು ಸತೀಶ್ ಅಡಪ್ಪ, ನಿರ್ದೇಶಕರು ಮತ್ತಿತರರು ಉಪಸ್ಥಿತರಿದ್ದರು

Related Posts

Leave a Reply

Your email address will not be published.