ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ಕಲಿಸುವುದು ಅನಿವಾರ್ಯ: ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ
ದೇಶಕ್ಕಾಗಿ ಉತ್ತಮ ಪ್ರಜೆಗಳನ್ನು ನಿರ್ಮಾಣ ಮಾಡುವ ಕಾರ್ಖನೆಗಳು ಶಾಲೆ, ಶಾಲೆಗಳು ಪಾಠ ಸಹಿತ ಪಠ್ಯೇತರ ಚಟುವಟಿಕೆ ನಡೆಸಿದರೆ, ಅದೇ ಮಕ್ಕಳಿಗೆ ಮನೆಗಳಲ್ಲಿ ನಮ್ಮ ನಮ್ಮ ಧರ್ಮಗಳ ಸಂಸ್ಕಾರ ಕಲಿಸುವ ಅಗತ್ಯತೆ ಇದೆ ಎಂಬುದಾಗಿ ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ ಹೇಳಿದ್ದಾರೆ.
ಅವರು ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣಾ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಸಂದರ್ಭ ಮಕ್ಕಳ ದಿನಾಚರಣಾ ಅಂಗವಾಗಿ ಆಯೋಜಿಸಿದ ವಿವಿಧ ಮನರಂಜನಾ ಹಾಗೂ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮ ಆರಂಭಕ್ಕೆ ಮುನ್ನ ವಿಧ್ಯಾರ್ಥಿಗಳಿಗಾಗಿ ಆಯೋಜಿಸಿದ ಛದ್ಮವೇಷ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪುಟಾಣಿಗಳು ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.
ಈ ಸಂದರ್ಭ ವೇದಿಕೆ ಕಾರ್ಯಕ್ರಮದ ಪ್ರಯೋಜಕರಾದ ಸದಾನಂದ ಕೆ., ಗ್ರಾ.ಪಂ. ಸದಸ್ಯ ಹೇಮಚಂದ್ರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಕಾಶ್ ಪೂಜಾರಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ್ ಪಿ. ಆರ್., ಸಂಪನ್ಮೂಲ ವ್ಯಕ್ತಿ ಕವಿತಾ, ಪ್ರಾಂಶುಪಾಲೆ ಅನುರಾಧ, ಕೆ.ಪಿ.ಎಸ್. ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಜಾನೆಟ್ ಕ್ಲಾರಾ ಮುಂತಾದವರಿದ್ದರು.