ಜಪ್ಪಿನಮೊಗರು : ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
ಜಪ್ಪಿನಮೊಗರು ಗ್ರಾಮದ ಕೊಪ್ಪರಿಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನುವ ಘಟನೆ ನಡೆದಿದೆ.
ಕೊಪ್ಪರಿಗೆಗುತ್ತು ನಿವಾಸಿ ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮೀತ್ ಶೆಟ್ಟಿ (25) ಸುಟ್ಟ ಗಾಯಗೊಂದಿಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ ಸ್ವಾಮೀತ್ ಶೆಟ್ಟಿಯ ತಂದೆ ವಿಶ್ವನಾಥ ಶೆಟ್ಟಿ ತಕರಾರು ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದು ಬಳಿಕ ಪೆಟ್ರೊಲ್ ನ್ನು ಮಗನ ಮೈ ಮೇಲೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.