ಮನೆಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣ : ಏಳು ಮಂದಿ ಆರೋಪಿಗಳ ಬಂಧನ

ಶಕ್ತಿನಗರ ಸಮೀಪದ ಸರಿಪಲ್ಲದ ಮನೆಯೊಂದಕ್ಕೆ ಮಾರಕಾಸ್ತ್ರದೊಂದಿಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ 7 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು.

ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ  ಮನೆಯೊಂದಕ್ಕೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ  ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿತ್ (21), ಹೇಮಂತ್ (19), ಧನುಷ್ (19) ಹಾಗೂ ಯತಿರಾಜ್ (23) ಬಂಧಿಸಲಾಗಿದೆ. ಬಂಧಿತರಿಂದ ಮಾರಕಾಸ್ತ್ರಗಳನ್ನು ಹಾಗೂ ದ್ವಿಚಕ್ರ ವಾಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಪೆÇಲೀಸರು ಯಶಸ್ಸು ಆಗಿದ್ದಾರೆ ಎಂದು ಹೇಳಿದರು.

 

Related Posts

Leave a Reply

Your email address will not be published.