ಮಲೆನಾಡಿನಲ್ಲಿ ಕಾಡಾನೆ ಹಾವಳಿ : ಭತ್ತ ಬೆಳೆದ ರೈತ ಕಂಗಾಲು
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿದ್ದು ರೈತರು ಬೆಳೆದ ಬೆಳೆಗಳು ಹಾಳಾಗಿದ್ದು ರೈತ ತಲೆ ಮೇಲೆ ಕೈಹೊತ್ತು ಕುಳಿತು ಕಂಗಾಲಾಗಿದ್ದಾನೆ. ಹಾಸನ ಜಿಲ್ಲೆ ಆಲೂರು ತಾಲೂಕಿನ ಅಚ್ಚ ಗೊಡನಹಳ್ಳಿಯಲ್ಲಿ ಕಳೆದ ರಾತ್ರಿ ಸರಿಸುಮಾರು 32 ಆನೆಗಳು ರೈತರು ಬೆಳೆದ ಭತ್ತದ 3 ಎಕರೆಯ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿವೆ. ಅಲ್ಲದೆ ಅದೇ ಪ್ರದೇಶದಲ್ಲಿ ಬೆಳೆದಿರುವ ಗೆಣಸು, ಅಡಕೆ, ಬಾಳೆ ಮುಂತಾದ ಬೆಳೆಗಳು ಸಂಪೂರ್ಣವಾಗಿ ನಾಶಮಾಡಿವೆ. ಅಚ್ಚಗೊಡನಹಳ್ಳಿಯ ಜಗದೀಶ್ ಎಂಬುವವರಿಗೆ ಸೇರಿದ ಸುಮಾರು 2 ಎಕರೆಯಲ್ಲಿ ಬೆಳೆದ ಭತ್ತದ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು ಕಾಡಾನೆಗಳು ತುಳಿದು ನಾಶ ಮಾಡಿವೆ. ಇನ್ನಾದರೂ ಅರಣ್ಯಾಧಿಕಾರಿಗಳು ಬಂದು ನಮ್ಮ ಕಷ್ಟಕ್ಕೆ ಬೆನ್ನೆಲುಬಾಗಿ ನಿಲ್ಲಬೇಕಾಗಿದೆ ಎಂಬುವುದು ರೈತರ ಅಳಲು