ಮಳೆಯಿಂದ ಹಾನಿಯಾಗಿರುವ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ್ ಶೆಟ್ಟಿ ಭೇಟಿ, ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಮಳೆ ಸುರಿದ ಪರಿಣಾಮ ಹಲವೆಡೆ ಹಾನಿ ಸಂಭವಿಸಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.

ನಗರದ ದೇರೆಬೈಲ್‌ನಲ್ಲಿ ವಾರ್ಡಿನ ಆಕಾಶಭವನದಲ್ಲಿ ಗುಡ್ಡ ಕುಸಿತ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.ಈ ವೇಳೆ ಮಾತನಾಡಿದ ಮೇಯರ್, ಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಅನಾಹುತ ಸಂಭವಿಸಿರುವ ಕುರಿತು ವರದಿ ಕೊಡಬೇಕೆಂದು ಸೂಚನೆ ಕೊಡಲಾಗಿದೆ ಎಂದು ಅವರು ಹೇಳಿದರು. ಈ ವೇಳೆ ಸ್ಥಳೀಯ ಪಾಲಿಕೆ ಸದಸ್ಯೆ ರಜನಿ ಕೋಟ್ಯಾನ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.