ಮಹಿಳಾ ಪೊಲೀಸ್ ಅಧಿಕಾರಿಯ ಅತ್ಯಾಚಾರ, ಹತ್ಯೆ ಖಂಡಿಸಿ : ಮೂಡಬಿದ್ರೆಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣವನ್ನು ಖಂಡಿಸಿ ಮೂಡಬಿದ್ರೆಯಲ್ಲಿ ಎಸ್‌ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಸಿಫ್ ಕೋಟೆಬಾಗಿಲು,ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಶೀಘ್ರ ಮುಕ್ತಾಯಗೊಳಿಸಿ ಆರೋಪಿಗಳಿಗೆ ಮರಣದಂಡನೆ ವಿಧಿಸುವ ಹೊಸ ಕಾನೂನನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ರು.
ಹೋರಾಟಗಾರ ಅಚ್ಯುತ ಸಂಪಿಗೆ ಮಾತನಾಡಿ ದೇಶದ ವಿವಿದೆಡೆ ಈ ಹಿಂದೆ ನಡೆದ ಅತ್ಯಾಚಾರ ಪ್ರಕರಣಗಳಲ್ಲಿ ಸರಕಾರ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದರಿಂದ ಅತ್ಯಾಚಾರ ಪ್ರಕರಣಗಳು ಮರುಕಳಿಸುತ್ತಿವೆ. ಸರಕಾರ ಒಂದೆಡೆ ರಾಮರಾಜ್ಯದ ಕನಸು ಕಾಣುತ್ತಿದ್ದರೆ ಇನ್ನೊಂದೆಡೆ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಲ್ಲಿದ್ದು ಮಹಿಳೆಯರು ಅಭದ್ರತೆಯಲ್ಲಿದ್ದಾರೆ ಎಂದು ಆರೋಪಿಸಿದರು.ಪ್ರತಿಭಟನೆಯಲ್ಲಿ ಹಲವಾರು ಮಂದಿ ಎಸ್‌ಡಿಪಿಐ ಕಾರ್ಯಕರ್ತರು ಪಾಲ್ಗೊಂಡಿದ್ರು.

Related Posts

Leave a Reply

Your email address will not be published.