ಮುಕ್ಕ ಶ್ರೀನಿವಾಸ್ ವಿಶ್ವವಿದ್ಯಾಲಯ : ಆನ್‍ಲೈನ್ ಅಣುಕು ಸಿಇಟಿ
ಪ್ರಸ್ತುತ ವಿದ್ಯಾಮಾನದಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಮುಕ್ಕ ಶ್ರೀನಿವಾಸ್ ವಿಶ್ವವಿದ್ಯಾಲಯ, ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ, ಮುಕ್ಕ ಇವರ ವತಿಯಿಂದ ಅಣುಕು ಸಿಇಟಿ ಪರೀಕ್ಷೆಯನ್ನು ಆಗಸ್ಟ್ 22 ಮತ್ತು 23 ರಂದು ಏರ್ಪಡಿಸಲಾಗಿದೆ. ಸಿಇಟಿ ಪರೀಕ್ಷೆಯನ್ನು ಎದುರಿಸುವ ಮಾಹಿತಿಯನ್ನು ಕೊಡಲಾಗುವುದೆಂದು ಕಾಲೇಜಿನ ಪ್ರಾಂಶುಪಾಲ ಡಾ. ಥಾಮಸ್ ಪಿಂಟೋ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಪರೀಕ್ಷೆಗಳು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ವಿಷಯಗಳಲ್ಲಿ ನಡೆಸಲಾಗುತ್ತಿದೆ. ಪ್ರತಿಯೊಂದು ವಿಷಯದಲ್ಲಿ 60 ನಿಮಿಷಗಳ ಪರೀಕ್ಷೆ ಇದಾಗಿದ್ದು ದಿನಾಂಕ 22 ರಂದು ಬೆಳಗ್ಗೆ 10 ರಿಂದ 11ರ ಅವಧಿಯಲ್ಲಿ ಗಣಿತಶಾಸ್ತ್ರ ಮತ್ತು ಮಧ್ಯಾಹ್ನ 2 ರಿಂದ 3 ರ ಅವಧಿಯಲ್ಲಿ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ದಿನಾಂಕ 23ರಂದು ಬೆಳಗ್ಗೆ 10 ರಿಂದ 11ರ ಅವಧಿಯಲ್ಲಿಭೌತಶಾಸ್ತ್ರ ಪರೀಕ್ಷೆ ನಡೆಯಲಿದೆ.
ಲಾಕ್ ಡೌನ್‍ನಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಈ ಅಣುಕು ಪರೀಕ್ಷೆಯ ಉಪಯೋಗವನ್ನು ಪಡೆದು ಇದೇ ತಿಂಗಳ ಅಂತ್ಯದಲ್ಲಿ ನಡೆಯುವ ಸಿಇಟಿ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಬಹುದಾಗಿದೆ. ಕ್ಲಿಷ್ಟತೆಯನ್ನು ಅರಿಯುವುದರ ಜೊತೆಗೆ ತಯಾರಿಕಾ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಇದು ಸಹಾಯಕವಾಗಲಿದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದರು.
ಆನ್‍ಲೈನ್ ಅಣುಕು ಪರೀಕ್ಷೆಯಲ್ಲಿ ಭಾಗವಹಿಸಲು ಇಚ್ಚಿಸುವ ಪಿಯುಸಿ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರೊ. ವಿಶ್ವಾಸ್ ಶೆಟ್ಟಿ (9743289292) ಅಥವಾ ಡಾ. ಪ್ರವೀಣ್ ಬಿ ಎಂ (9980951074) ಇವರನ್ನು ಸಂಪರ್ಕಿಸಬಹುದಾಗಿದೆ.
. Mail ID : [email protected]
http://forms.gle/RW25vzRbNH8Ngaoh9