ಮೂಡುಬಿದಿರೆಯ ಪುರಸಭೆ- ಗ್ರಾ.ಪಂ ಸದಸ್ಯರಿಗೆ ಪ್ರಶಿಕ್ಷಣ ವರ್ಗ ಕಾರ್ಯಕ್ರಮ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಪುರಸಭೆ ಮತ್ತು ಗ್ರಾ.ಪಂಚಾಯತ್ ಸದಸ್ಯರಿಗೆ ಪ್ರಶಿಕ್ಷಣ ವರ್ಗ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ  ನಡೆಯಿತು.


ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂಘಟನೆಯ ಆಧಾರ ಕಾರ್ಯಕರ್ತರು. ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು ಮತ್ತು ವಿಚಾರವಂತರಾಗಿ ಸಾಗಬೇಕೆನ್ನುವ ದೃಷ್ಠಿಕೋನದಿಂದ ಪ್ರಶಿಕ್ಷಣ ವರ್ಗ ರೂಪುಗೊಂಡಿದೆ. ಹಲವು ವರ್ಷಗಳ ನಂತರ ಜನರು ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ. ಜನರು ನಮ್ಮ ಮೇಲೆ ಇಟ್ಟ ಭರವಸೆಯನ್ನು ಉಳಿಸುವಂತಹ ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ ಎಂದರು.

ಮಂಡಲದ ಅಧ್ಯಕ್ಷ ಸುನೀಲ್ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಗತಿಗೆ ಪೂರಕವಾದ ಶಿಕ್ಷಣ ಪ್ರಶಿಕ್ಷಣ ವರ್ಗ. ಇಲ್ಲಿ ಸಿಗುವ ಮಾಹಿತಿಗಳನ್ನು ತಾವು ತಿಳಿದುಕೊಂಡು ಅಭಿವೃದ್ಧಿಯತ್ತ ಗಮನ ಹರಿಸಬೇಕೆಂದರು.


ಶಾಸಕ ಉಮಾನಾಥ ಕೋಟ್ಯಾನ್, ಮಂಡಲದ ಪ್ರಭಾರಿ ಗಣೇಶ್ ಹೊಸಬೆಟ್ಟು ಅತಿಥಿಗಳಾಗಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣೆಕ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯವಾಹ ವಾದಿರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಉಪಾಧ್ಯಕ್ಷ ಈಶ್ವರ್ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.