ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನೆ
ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ವಿಭಾಗೀಯ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನಾ ಸಭೆ ನಡೆಯಿತು.
ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಎಐಸಿಸಿ ವೀಕ್ಷಕ ಮಧು ಯಾಕ್ಷಿಗೌಡ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಧೃವನಾರಾಯಣ್, ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್, ಮಾಜಿ ಸಚಿವರಾದ ಆತ್ಮಾನಂದ್, ಚಲುವರಾಯಸ್ವಾಮಿ, ತನ್ವೀರ್ ಸೇಠ್, ನರೇಂದ್ರಸ್ವಾಮಿ, ಮಹದೇವಪ್ಪ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಭಾಗವಹಿಸಿದ್ದರು.