ಯಾರಿಗೂ ಹೇಳ್ಬೇಡಿ ಆಡಿಯೋ ನಕಲಿ ಅಥವಾ ಅಸಲಿಯೇ ಸಿಎಂ ಸ್ಪಷ್ಟ ಪಡಿಸಲಿ: ಯು.ಟಿ.ಖಾದರ್

 ಬಿಜೆಪಿ ರಾಜ್ಯಾಧ್ಯಕ್ಷರ ಆಡಿಯೋ ನಕಲಿ ಅಥವಾ ಅಸಲಿಯೇ ಎಂದು ಮುಖ್ಯ ಮಂತ್ರಿ ಸ್ಪಷ್ಟ ಪಡಿಸಬೇಕಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು.

ಹಾಲಿ ಸಿ.ಎಂ ಯಡಿಯೂರಪ್ಪ ಇನ್ನೂ ಮುಂದುವರಿಯುತ್ತಾರೋ ಇಲ್ಲವೋ ಎನ್ನುವುದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟವಾಗಿ ತಿಳಿಸಲಿ ಯು.ಟಿ.ಖಾದರ್ ಅವರು ಹೇಳಿದರು. ಇನ್ನು ಕಾಂಗ್ರೆಸ್‌ನಲ್ಲಿ ಯಾವುದೇ ಬಣವಿಲ್ಲ, ಎಲ್ಲಾರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಕೆಲಸ ಮಾಡುತ್ತಿದ್ದೇವೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ದೆಹಲಿ ಭೇಟಿ ಕೊಟ್ಟಿರುವುದು ಅನ್ಯಅರ್ಥ ಮಾಡುವ ಅಗತ್ಯವಿಲ್ಲ. ಪಕ್ಷ ಬಲವರ್ದನೆ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ರು

Related Posts

Leave a Reply

Your email address will not be published.