ಯೇನೆಪೊಯ ನರ್ಸಿಂಗ್ ಕಾಲೇಜಿನ ವತಿಯಿಂದ ಸಮ್ಮೇಳನ

ಯೇನೆಪೋಯ ವಿಶ್ವವಿದ್ಯಾಲಯದ ಅಧೀನಕ್ಕೆ ಒಳಪಟ್ಟ ಯೇನೆಪೋಯ ನರ್ಸಿಂಗ್ ಕಾಲೇಜು ಮಂಗಳೂರು ಮತ್ತು ಭಾರತದ ಶುಶ್ರೂಷಕರ ಸಂಶೋಧನಾ ಸೊಸೈಟಿ ಜಂಟಿ ಸಹಯೋಗದಲ್ಲಿ ನವೆಂಬರ್ 26 ಮತ್ತು 27 ರಂದು 24 ನೇ ರಾಷ್ಟ್ರಮಟ್ಟದ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಯೆನೆಪೋಯ ನರ್ಸಿಂಗ್ ಕಾಲೇಜಿನ ಡೀನ್ ಡಾ. ಲೀನಾ ಕೆ.ಸಿ. ತಿಳಿಸಿದರು.


ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸಂಶೋಧನಾ ಬರಹಗಳ ಮೂಲಕ ನರ್ಸಿಂಗ್ ಪಾಂಡಿತ್ಯವನ್ನು ಬಲಪಡಿಸುವುದು ಎಂಬ ವಿಷಯದಲ್ಲಿ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಕಾರ್ಯಕ್ರಮದ ಸಂಯೋಜಕರಾದ ಡಾ. ಪ್ರಿಯಾ ರೇಶ್ಮ ಅರಾನ್ನಾ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.